ದಾವಣಗೆರೆ; ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ 3 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ, 20 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೀಸಲಾತಿಗೆ ಅನುಗುಣವಾಗಿ ಅರ್ಹ ಸ್ಥಳೀಯ ಮಹಿಳಾ, ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನನಾಧಿಕಾರಿಗಳ ಕಚೇರಿಯಲ್ಲಿ ಪಡೆದು ಜೂನ್ 26 ರ ಸಂಜೆ 5.30 ಗಂಟೆಯೊಳಗಾಗಿ ಭರ್ತಿ ಮಾಡಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪಿ.ಎಲ್.ಡಿ ಬ್ಯಾಂಕ್ ಬಿಲ್ಡಿಂಗ್, ಶಿವಮೊಗ್ಗ ರೋಡ್, ಹರಿಹರ ಹಾಗೂ ದೂ. ಸಂ: 08192-241431 ಸಂಪರ್ಕಿಸಲು ಕೋರಿದೆ.