ಖಾಲಿ ಇರುವ ಬರೋಬ್ಬರಿ 5,810 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ ಸ್ಟೇಷನ್ ಮಾಸ್ಟರ್, ಸೀನಿಯರ್ ಕ್ಲರ್ಕ್ & ಟೈಪಿಸ್ಟ್ ಮುಂತಾದ ಹುದ್ದೆಗಳಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ದೇಶಾದ್ಯಂತ . ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನವೆಂಬರ್ 20.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಚೀಫ್ ಕಮರ್ಷಿಯಲ್ & ಟಿಕೆಟ್ ಸೂಪರ್‌ವೈಸರ್-161 ಹುದ್ದೆ, ಸ್ಟೇಷನ್ ಮಾಸ್ಟರ್- 615 ಹುದ್ದೆ, ಗೂಡ್ಸ್ ಟ್ರೈನ್ ಮ್ಯಾನೇಜರ್- 3,416 ಹುದ್ದೆ, ಜೂನಿಯರ್ ಅಕೌಂಟ್ ಅಸಿಸ್ಟಂಟ್ & ಟೈಪಿಸ್ಟ್- 638 ಹುದ್ದೆ, ಸೀನಿಯರ್ ಕ್ಲರ್ಕ್ & ಟೈಪಿಸ್ಟ್- 638 ಹುದ್ದೆ, ಟ್ರಾಫಿಕ್ ಅಸಿಸ್ಟಂಟ್- 59 ಹುದ್ದೆ. ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ರಿಯಾಯಿತಿ ಇದೆ ಎಂದು ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಮಾಜಿ ಯೋಧರು/ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಇಬಿಸಿ/ಮಹಿಳಾ/ತೃತೀಯ ಲಿಂಗಿ/ಅಲ್ಪ ಸಂಖ್ಯಾತ ಅಭ್ಯರ್ಥಿಗಳು 250 ರೂ. ಮತ್ತು ಉಳಿದೆಲ್ಲ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ
ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
RRB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://www.rrbapply.gov.in/#/auth/home)
‘Create An Account’ ಆಯ್ಕೆ ಮಾಡಿ ಕ್ಲಿಕ್ ಮಾಡಿ.
ಹೆಸರು ರಿಜಿಸ್ಟರ್ ಮಾಡಿಕೊಳ್ಳಿ.
ಲಾಗಿನ್ ಆಗಿ.
ಈಗ ಕಂಡುಬರುವ ಅರ್ಜಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
ಅರ್ಜಿ ಶುಲ್ಕ ಭರ್ತಿ ಮಾಡಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ:indianrailways.gov.inಗೆ ಭೇಟಿ ನೀಡಿ.

































