ಚಿತ್ರದುರ್ಗ: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಮೂಲಕ ವಿವಿಧ ಯೋಜನೆಗಳಯಡಿ ಸಾಲ ಸೌಲಭ್ಯ ಪಡೆಯಲು ಅ.25 ರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೊಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆಗಳಿಗೆ ವೆಬ್ಸೈಟ್ https://kccdclonline.karnataka.gov.in ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದ ಕ್ರಿಶ್ಚಿಯನ್ ಸಮುದಾಯದ ಖಾಯಂ ನಿವಾಸಿಗಳಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಹೊಂದಿರಬೇಕು. ಸರ್ಕಾರಿ ಸೌಲಭ್ಯವನ್ನು (ಸಾಲ ಸಹಾಯಧನ) ಪಡೆಯುವ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಕುಟುಂಬದ ಯಾವುದೇ ಸದಸ್ಯರು ರಾಜ್ಯ ಅಥವಾ ಕೇಂದ್ರ ಪಿ.ಎಸ್.ಯು ಸರ್ಕಾರದ ಉದ್ಯೋಗಿಯಾಗಿರಬಾರದು. ವಿವಿಧ ಯೋಜನೆಗಳಿಗೆ ಅನುಗುಣವಾಗಿ ದಾಖಲಾತಿಗಳನ್ನು ಒದಗಿಸಬೇಕು.
ಅರ್ಜಿ ಸಲ್ಲಿಕೆಗೆ ನವೆಂಬರ್ 27 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kccdclonline.karnataka.gov.in ಅಥವಾ ಕಚೇರಿ ದೂರವಾಣಿ ಸಂಖ್ಯೆ 08194-226412 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

































