ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 258 ಕೃಷಿ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಜಿ ಆಹ್ವಾನಿಸಿದೆ.
ಗ್ರೂಪ್ ಬಿ ವೃಂದದ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು.
ಬಿಎಸ್ಸಿ ಕೃಷಿ, ಬಿಎಸ್ಸಿ ಆನರ್ಸ್(ಕೃಷಿ), ಬಿಟೆಕ್ ಪದವೀಧರರು ಆನ್ ನೈಲ್ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 10 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಶುಲ್ಕ ಪಾವತಿಸಲು ಮೇ 12 ಕೊನೆಯ ದಿನವಾಗಿದೆ.
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ವಿಶೇಷ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ, ಅಂಗವಿಕಲರಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 43 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 45 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ,
ಜೂನ್ 6 ರಂದು ಕನ್ನಡ ಭಾಷಾ ಪರೀಕ್ಷೆ, ಜೂನ್ 14ರಂದು ಪತ್ರಿಕೆ -1 ಮತ್ತು ಪತ್ರಿಕೆ -2ರ ಪರೀಕ್ಷೆಗಳು ನಡೆಯಲಿವೆ. ಎಂದು ಹೇಳಲಾಗಿದೆ.
































