ಚಿತ್ರದುರ್ಗ : ಐದು ವಾರದ ದೇಶಿ ಕೋಳಿಮರಿಗಳನ್ನು ಉಚಿತವಾಗಿ ವಿತರಿಸಲು ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳಿ ನಿಯಮಿತ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ 17, ಪರಿಶಿಷ್ಟ ಪಂಗಡ 7, ಹಿಂದುಳಿದ ವರ್ಗಗ 32, ಸಾಮಾನ್ಯ ವರ್ಗಕ್ಕೆ 43 ಗುರಿ ನಿಗದಿಪಡಿಸಲಾಗಿದೆ.
ಆಸಕ್ತ ಗ್ರಾಮೀಣ ರೈತ ಮಹಿಳೆಯರು ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರದೊಂದಿಗೆ ನವೆಂಬರ್ 15 ಸಂಜೆ 4 ಗಂಟೆ ಒಳಗೆ ಅರ್ಜಿಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಸಲ್ಲಿಕೆಗೆ ಮೊಳಕಾಲ್ಮೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.

































