ಚಿತ್ರದುರ್ಗ: ನಗರದ ರುಡ್ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ 13 ದಿನಗಳ ಉಚಿತ “ಸಮಗ್ರ ಕೃಷಿ ತರಬೇತಿ” ಕಾರ್ಯಕ್ರಮವನ್ನು ಆಯೋಜಿಸಿದೆ.
ತರಬೇತಿಯಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ಕುರಿ ಸಾಕಾಣಿಕೆ ಸೇರಿದಂತೆ ಇತರೆ ಕೃಷಿ ಚಟುವಟಿಕೆಗಳ ಕುರಿತು ತಿಳಿಸಿಕೊಡಲಾಗುವುದು. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸಹಿತ ಸಂಪೂರ್ಣವಾಗಿ ಉಚಿತವಾಗಿರುತ್ತದೆ.
ವಯೋಮಿತಿ 19 ರಿಂದ 50 ವರ್ಷಗಳ ಒಳಗಿರುವ, ಕನ್ನಡ ಓದಲು ಮತ್ತು ಬರೆಯಲು ಬರುವ, ಕೃಷಿ ಹಾಗೂ ಸಂಬಂಧಿತ ಉದ್ಯೋಗ ಮಾಡಲು ಆಸಕ್ತಿ ಹೊಂದಿರಬೇಕು ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಬಹುದು.
ಈ ತರಬೇತಿಯು ಜೂನ್ 08, 2026 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಉಲ್ಲೇಖಿಸಿರುವ ಸ್ವವಿವರದ ಅರ್ಜಿಯೊಂದಿಗೆ, ಆಧಾರ್ ಹಾಗೂ ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಸೇರಿದಂತೆ ಅಗತ್ಯ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಜೂನ್ 08, ರಂದು ಬೆಳಿಗ್ಗೆ ನಗರದ ಕೆಳಗೋಟೆಯ ರಾಷ್ಟ್ರೀಯ ಹೆದ್ದಾರಿ-4 ರ ಬಳಿ ಇರುವ ರುಡ್ಸೆಟ್ ಸಂಸ್ಥೆಗೆ ನೇರವಾಗಿ ಭೇಟಿ ನೀಡಿ ತರಬೇತಿಗೆ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 8431329162, 8618282445, 9019299901, 8660627785 ಸಂಪರ್ಕಿಸಬಹುದು.
(AI ಚಿತ್ರ)





























