ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಯೋಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿ.10 ರೊಳಗಾಗಿ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ
ಅಧೀಕ್ಷಕಿ ಲತಾ ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೂ.ಸಂ.:08182-200266 / 9482762350