ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನಡಿ 15 ದಿನಗಳ ಉಚಿತ ಜಿಮ್ ಮತ್ತು ಫಿಟ್ನೆಸ್ ತರಬೇತಿ ಶಿಬಿರವನ್ನು ಆಯೋಜಿಸಿದೆ. 18 ರಿಂದ 35 ವರ್ಷದೊಳಗಿನ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿಯ ಯುವಕರು ಮಾತ್ರ ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನ ಪ್ರತಿಷ್ಠಿತ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಫೆಬ್ರವರಿ 1 ರಿಂದ ಮಾರ್ಚ್ 17 ವರೆಗೆ ತರಬೇತಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ವತಿಯಿಂದಲೇ ಉಚಿತ ವಸತಿ, ಊಟ ಮತ್ತು ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿಯ ನಂತರ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು.
ಆಸಕ್ತರು ನಗರದ ಓನಕೆ ಒಬವ್ವ ಕ್ರೀಡಾಂಗಣದಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಅಗತ್ಯ ದಾಖಲೆಗಳೊಂದಿಗೆ ಜನವರಿ 28 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635 ಗೆ ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಗಿ ತಿಳಿಸಿದ್ದಾರೆ.

































