ಚಿತ್ರದುರ್ಗ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಮೇ 19ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ www.mysore.nic.in ಮತ್ತು www.cavamysore.karnataka.gov.in ಅಂತರ್ಜಾಲದ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
































