ದಾವಣಗೆರೆ; 2022-23ನೇ ಸಾಲಿನ ಶೈಕ್ಷಣಿಕ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್.೩೧ ಕೊನೆಯ ದಿನವಾಗಿರುತ್ತದೆ. ದ್ವಿತಿಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ಬಿ.ಇ, ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಬ್ಯಾಕ್ ಪಾಸ್ ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್ಗಳ ಧೃಡೀಕರಣ ಪ್ರತಿ ಹಾಗೂ ಆನ್‌ಲೈನ್ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಶುಪಾಲರ ದೃಢೀಕರಣದೋದಿಗೆ ಸಂಬಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಛೇರಿ ಅಥವಾ ಉಪನಿದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ.೩೭, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.