ದಾವಣಗೆರೆ :ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ ಅಡಿಯಲ್ಲಿ 2024 ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಮೂಲಕ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.































