ವೀರಶೈವ ಸಮಾಜದವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.!

WhatsApp
Telegram
Facebook
Twitter
LinkedIn

 

ಚಿತ್ರದುರ್ಗ : ಚಿತ್ರದುರ್ಗದ ವೀರಶೈವ ಸಮಾಜದವತಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನ ಮಾಡಿದೆ ಎಂದು ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್ ತಿಳಿಸಿದ್ದಾರೆ.

2025-26ರ ಸಾಲಿನಲ್ಲಿ ವಿದ್ಯಾಭ್ಯಾಸ ಮಾಡಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡಾ 90% ಮೇಲ್ಪಟ್ಟು ಅಂಕೆಗಳಿಸಿದ ಚಿತ್ರದುರ್ಗ ತಾಲ್ಲೂಕಿನ ವೀರಶೈವ/ಲಿಂಗಾಯಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ವೀರಶೈವ ಸಮಾಜವು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ 31-05-2026 ರೊಳಗಾಗಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30, ಸಂಜೆ 5.00 ರಿಂದ 8.30ರವರೆಗೆ  ವೀರಶೈವ ಸಮಾಜದ ವ್ಯವಸ್ಥಾಪಕರಲ್ಲಿ  ತಾವು ಅಭ್ಯಾಸ ಮಾಡಿದ ಪ್ರೌಢಶಾಲೆ/ಕಾಲೇಜು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ದೃಢೀಕರಣ ಪತ್ರದೊಂದಿಗೆ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿರುವ ವೀರಶೈವ ಸಮಾಜದ ಕಛೇರಿಗೆ ಅರ್ಜಿ ಸಲ್ಲಿಸಲು ವೀರಶೈವ ಸಮಾಜ ಕಾರ್ಯದರ್ಶಿ ಪಿ. ವೀರೇಂದ್ರಕುಮಾರ್ ತಿಳಿಸಿದ್ದು ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕರು : 9986295285 ಇವರನ್ನು ಸಂಪರ್ಕ ಮಾಡಬಹುದಾಗಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon