ವಿವಿಧ ಹುದ್ದೆಗಳ ನೇಮಕಾತಿg ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ನಗರದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಕ್ಕೆ ಗೌರವಧನ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 18-45 ವರ್ಷಗಳ ವಯೋಮಿತಿಯಲ್ಲಿರುವ ಅರ್ಹ ಅಭ್ಯರ್ಥಿಗಳು ಫೆ.6 ರ ಒಳಗೆ ಅರ್ಜಿ ಸಲ್ಲಿಸಬಹುದು.

ಫಿಸಿಯೋಥೆರಪಿಸ್ಟ್/ಆಕ್ಯುಪೇಷನಲ್ ಥೆರಪಿಸ್ಟ್, ಪಿ&ಓ ಕೃತಕಾಂಗ ಜೋಡಣೆ ಅಭಿಯಂತರ, ಪ್ರಾಥೋಟಿಸ್ಟ್ & ಆರ್ಥೋಟಿಸ್ಟ್ (ಪಿ & ಓ), ಸ್ಪೀಚ್ ಥರೆಪಿಸ್ಟ್ & ಆಡಿಯಾಲಿಜಿಸ್ಟ್, ಮೊಬಿಲಿಟಿ ಇನ್ಸಟ್ರಕ್ಟರ್, ಇಯರ್ ಮೋಲ್ಡ್ ಟೆಕ್ನಿಷಿಯನ್ ತಲಾ ಒಂದು ಹುದ್ದೆಗಳು ಖಾಲಿಯಿವೆ.

ಈ ಹುದ್ದೆಗಳಿಗೆ ಸಂವಾದಿಯಾಗಿ ಅರ್ಹ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರದೊಂದಿಗೆ ಅರ್ಜಿಯನ್ನು ಸಿದ್ದಪಿಡಿಸಿ, ಮೊಬೈಲ್ ಸಂಖ್ಯೆ ನಮೂದಿಸಿ, ಅಗತ್ಯ ದಾಖಲೆಗಳೊಂದಿಗೆ ಕಾರ್ಯದರ್ಶಿಗಳು, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ , ಲೋಕಾಯುಕ್ತ ಕಚೇರಿ ಆವರಣ ಬಿ.ಡಿ.ರಸ್ತೆ ಚಿತ್ರದುರ್ಗ-577501 ಇಲ್ಲಿಗೆ ಸಲ್ಲಿಸತಕ್ಕದ್ದು.

ವಿದ್ಯಾರ್ಹತೆ, ಅನುಭವ ಹಾಗೂ ಮಾಸಿಕ ವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08914-220085, ಮೊಬೈಲ್ ಸಂಖ್ಯೆ 9448038400 ಕರೆ ಮಾಡಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon