ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣಕ್ಕೆ ಒಬ್ಬರು ಷಟಲ್ ಬ್ಯಾಡ್ಮಿಂಟನ್ ತರಬೇತುದಾರರನ್ನು ತಾತ್ಕಾಲಿಕವಾಗಿ ಮಾಸಿಕ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ತರಬೇತುದಾರರು ಮೂಲ ದಾಖಲಾತಿಗಳೊಂದಿಗೆ ಏಪ್ರಿಲ್ 2 ರಂದು ಸಂಜೆ 3 ಗಂಟೆಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಕೊಠಡಿ ಸಂಖ್ಯೆ: 46, ಜಿಲ್ಲಾಧಿಕಾರಿಗಳ ಕಛೇರಿ, ದಾವಣಗೆರೆ ಜಿಲ್ಲೆ, ದಾವಣಗೆರೆ ಇಲ್ಲಿ ನೇರವಾಗಿ ಸಂದರ್ಶನಕ್ಕೆ ಹಾಜರಾಗಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
































