ದಾವಣಗೆರೆ; ರಾಜ್ಯದಲ್ಲಿರುವ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಗಳಲ್ಲಿ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ ಅಥವಾ ಡಿಪ್ಲೊಮಾ ಮತ್ತು ವೃತ್ತಿಪರ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ರಾಜ್ಯ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗಧಿತ ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಶುಲ್ಕ ರಹಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಒಂದನೇ ತರಗತಿಯಿಂದ ಅಂತಿಮ ಪದವಿ ಅಥವಾ ಡಿಪ್ಲೊಮಾವರೆಗೆ ವ್ಯಾಸಂಗ ಮಾಡಿತ್ತಿರುವವರು ಸೆಪ್ಟಂಬರ್ 30 ರೊಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ. ಸಂ. 08182-220925 ಗೆ ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ, ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.