ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

WhatsApp
Telegram
Facebook
Twitter
LinkedIn

 

ಕೊಪ್ಪಳ: ಗಂಗಾವತಿ ನಗರಸಭೆ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿಯಲ್ಲಿ ನಗರದ ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಗಳ ಯೋಜನೆಗಳನ್ನು ಕಲ್ಪಿಸುವುದಕ್ಕಾಗಿ ನಗರ ಮಟ್ಟದಲ್ಲಿ ಬ್ಯಾಂಕ್‌ಗಳ ಸಂಯೋಗದೊಂದಿಗೆ ಲೋಕ ಕಲ್ಯಾಣ ಮೇಳಗಳನ್ನು ಜೂನ್ 1 ರಿಂದ ಜೂ. 30ರ ವರೆಗೆ ಒಂದು ತಿಂಗಳ ಕಾಲ ಆಯೋಜಿಸುವಂತೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ ನವದೆಹಲಿ ಮತ್ತು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಬೆಂಗಳೂರು ರವರು ಸೂಚಿಸಿರುತ್ತಾರೆ.

ಅದರಂತೆ ಗಂಗಾವತಿ ನಗರದ ಬೀದಿಬದಿ ವ್ಯಾಪಾರಿಗಳಿಗೆ ಜೂ. 1 ರಿಂದ 30ರ ವರೆಗೆ ನಗರದ ಬೀದಿಬದಿ ವ್ಯಾಪಾರಿಗಳು ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ಪಿ.ಎಮ್ ಸ್ವನಿಧಿ ಯೋಜನೆಯಡಿ ರೂ. 15,000 ಗಳು, ರೂ. 25,000 ಗಳು ಮತ್ತು ರೂ. 50,000 ಗಳ ಕಿರು ಸಾಲ ಸೌಲಭ್ಯಕ್ಕಾಗಿ ಅರ್ಜಿಯನ್ನು ಸಲ್ಲಿಸಲು ನಗರ ಸ್ಥಳೀಯ ಸಂಸ್ಥೆಗಳ ಡೇ ನಲ್ಮ್ ವಿಭಾಗವನ್ನು ಸಂಪಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಗಂಗಾವತಿ ನಗರಸಭೆ ಡೇ-ನಲ್ಮ್ ವಿಭಾಗದ ಸಿಬ್ಬಂದಿಗಳನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸುವAತೆ ಗಂಗಾವತಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon