ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ.

ಅರ್ಹ ಅಭ್ಯರ್ಥಿಗಳು ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಶೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್‍ಬುಕ್ (ಕಟ್ಟಾಯವಾಗಿ ಆಧಾರ್ ಲಿಂಕ್ ಮಾಡಿಸಿರಬೇಕು) ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಜಾಲತಾಣ https://sevsindhu.karnataka.gov.in  ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-235134 ಗೆ ಸಂಪರ್ಕಿಸಬಹುದು ಎಂದು  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon