ಬಳ್ಳಾರಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಎಲೆಕ್ಟಿçಕಲ್ ವಿಭಾಗದಲ್ಲಿ ಅತಿಥಿ ಬೋಧಕ ಹುದ್ದೆಗೆ ಅರ್ಹರಿಂದ ಆಹ್ವಾನಿಸಲಾಗಿದೆ.
ಇಇಇ ವಿಭಾಗದಲ್ಲಿ ಬಿಇ (ಬಿ.ಟೆಕ್) ಪದವಿ ಪೂರ್ಣಗೊಳಿಸಿದ ಪದವೀಧರರಾಗಿರಬೇಕು. 3 ರಿಂದ 5 ವರ್ಷಗಳ ಅನುಭವವಿರಬೇಕು.ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ ಮೆಂಟ್ ನ ಐಶ್ವರ್ಯ ಕಾಲೋನಿಯ ಐಟಿಐ ಕ್ಯಾಂಪಸ್ ನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಮುತ್ತಣ್ಣ ಧರ್ಮಂತಿ ಅಥವಾ ದೂ.08392-200087, ಮೊ.9620057086 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





























