ದಾವಣಗೆರೆ : 2024-25ನೇ ಸಾಲಿನ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಭತ್ಯೆ ನೀಡಲು ಅರ್ಹ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ರಸ್ತೆ, ದಾವಣಗೆರೆ -577006 ಅರ್ಜಿಗಳನ್ನು ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜನವರಿ 18 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.