ಚಿತ್ರದುರ್ಗ: ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ. ಬಿ.ಆರ್, ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2023-24 ನೇ ಸಾಲಿನ 6ನೇ ತರಗತಿ ಪ್ರವೇಶಾತಿ ಪಟ್ಟಿ ಬಿಡುಗಡೆ ಮಾಡಿದ್ದು ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ.
ಪ್ರಸ್ತುತ 6ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಅನಿವಾರ್ಯ ಕಾರಣಗಳಿಂದ ವರ್ಗಾವಣೆ ಕೋರಿದಲ್ಲಿ ಅದೇ ವರ್ಗದ ಹಾಗೂ ಲಿಂಗವಾರು ಸ್ಥಾನಗಳು ಲಭ್ಯವಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಾವು ದಾಖಲಾತಿ ಪಡೆದಿರುವ ವಸತಿ ಶಾಲೆಯ ಪ್ರಾಂಶುಪಾಲರಿಗೆ ಜುಲೈ 27 ರ ಒಳಗಾಗಿ ವರ್ಗಾವಣೆಗೆ ಕೋರಿ ಅರ್ಜಿ ಸಲ್ಲಿಸಬಹುದು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಮೆರಿಟ್ ಅನುಸಾರ ಖಾಲಿ ಇರುವ ಸ್ಥಾನಗಳಿಗೆ ಮಾತ್ರ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.