ದಾವಣಗೆರೆ : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು (https://www.karnatakaone.gov.in/Public/Franchisee Terms) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆಯದಿನವಾಗಿರುತ್ತದೆ.
ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಯ ಹೆಸರು: ದಾವಣಗೆರೆ ತಾಲ್ಲೂಕಿನ ದಾವಣಗೆರೆ- ಸಿಸಿ, ಹರಿಹರ ತಾಲ್ಲೂಕಿನ ಹರಿಹರ-ಸಿಎಂಸಿ, ಹೊನ್ನಾಳಿ ತಾಲ್ಲೂಕಿನ ಹೊನ್ನಾಳಿಯ-ಟಿಎಂಸಿ, ನ್ಯಾಮತಿ ತಾಲ್ಲೂಕಿನ ನ್ಯಾಮತಿ ಟಿಪಿ ಖಾಲಿ ಇರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದ್ದಾರೆ.






























