ಚಿತ್ರದುರ್ಗ: ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿಯಲ್ಲಿರುವ ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಸ್ವ ಉದ್ಯೋಗ ಮಾಡಲು ಉಚಿತ ಹೊಲಿಗೆ ತರಬೇತಿ ನೀಡಲಾಗುವುದು.
ತರಬೇತಿಯ ಅವಧಿ 31 ದಿನಗಳಾಗಿದ್ದು, ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ. 19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ಹೊಲಿಗೆ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು. ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ದಿ.07 ಜನವರಿ 2026 ರಂದು ರುಡ್ಸೆಟ್ ಸಂಸ್ಥೆಯಲ್ಲಿ ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೊಲಿಗೆ ಕುರಿತು ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.861828445, 8660627785 ಅನ್ನು ಸಂಪರ್ಕಿಸಬಹುದು.
































