ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 8 ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 3 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಈವರೆಗೆ ಕೆಲವೊಂದು ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಅಲಭ್ಯವಾಗಿದ್ದು ಅರ್ಜಿ ಸಲ್ಲಿಕೆ ಅವಧಿಯನ್ನು ಅ.20 ರವರೆಗೆ ವಿಸ್ತರಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆಯನ್ನು ಇಲಾಖೆಯ ವೆಬ್ಸೈಟ್ – https://karnemakaone.kar.nic.in/abcd- ನಲ್ಲಿ ನಮೂದಿಸಿ ಮೊದಲಿಗೆ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್ಲೋಡ್ ಮಾಡಿ ಕಡ್ಡಾಯವಾಗಿ ಇ-ಸೈನ್ ಹಾಕಿದ ಬಳಿಕ ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ, ನಾಲ್ಕನೇ ಹಂತದಲ್ಲಿ ಅರ್ಜಿಗಳನ್ನು ಮುದ್ರಿಸಬಹುದು.
ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
				
															
                    
                    
                    
                    

































