ಬೆಂಗಳೂರು: M.Sc ನರ್ಸಿಂಗ್, MPT, M.Sc ಅಲೈಡ್ ಹೆಲ್ತ್ ಸೈನ್ಸ್‌ನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದಿನಿಂದ ಅವಕಾಶ ಕಲ್ಪಿಸಿದೆ.
ಡಿಸೆಂಬರ್ 2 ಅರ್ಜಿ ಸಲ್ಲಿಸಲು ಕೊನೆದಿನ. ರಾಜ್ಯದ ಅಭ್ಯರ್ಥಿಗಳು ಆಯಾಯ ಪದವಿ ಕೋರ್ಸ್‌ಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, 2024-25ನೇ ಸಾಲಿಗೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.