ದಾವಣಗೆರೆ : ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ.25,000/- ಗಳಂತೆ ಶಿಷ್ಯ ವೇತನ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 14 ಕೊನೆಯ ದಿನವಾಗಿರುತ್ತದೆ. ಆಯಾ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆಯಬಹುದೆಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.