ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಕಾನೂನು ಸೇವಾ ಸಮಿತಿಯಲ್ಲಿ ಅರೇ ಕಾಲಿಕ ಸ್ವಯಂ ಸೇವಕರಾಗಿ (ಪಿಎಲ್‍ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 12 ಅರ್ಜೀ ಸಲ್ಲಿಸಲು ಕೊನೆಯ ದಿನ.
ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ನಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ-ಹಸ್ತಾಕ್ಷರದಿಂದ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಹಿರಿಯೂರು ತಾಲ್ಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಲಯಗಳ ಸಂಕೀರ್ಣ, ಹಿರಿಯೂರು ಇಲ್ಲಿಗೆ ಸಲ್ಲಿಸಬಹುದಾಗಿರುತ್ತದೆ. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (para legal volunteers) ಅಂತ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುವುದರಿಂದ. ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಅದನ್ನು ಭರ್ತಿಮಾಡಿ ಜುಲೈ 12ರ ಸಂಜೆ 5.30 ರ ಅವಧಿಯ ಒಳಗೆ ತಾಲ್ಲೂಕು ಕಾನೂನು ಸೇವಾ ಸಮಿತಿ, ಹಿರಿಯೂರು ಇಲ್ಲಿ ಖುದ್ದಾಗಿ ಸಲ್ಲಿಸುವಂತೆ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ತಿಳಿಸಿದ್ದಾ