ಚಿತ್ರದುರ್ಗ: ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯಿಂದ ಯುವ ಸ್ಪಂದನ ಕಾರ್ಯಕ್ರಮದಡಿ ಯುವ ಸಮಲೋಚಕರು ಹಾಗೂ ಯುವ ಪರಿವರ್ತಕರ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ.22 ಅರ್ಜಿ ಸಲ್ಲಿಸಲು ಕೊನೆಯ ದಿನ.
ಯುವ ಸಮಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್‍ಡಬ್ಲ್ಯೂ ಪದವಿ ಪಡೆದಿರಬೇಕು ಹಾಗೂ ಚಿತ್ರದುರ್ಗ ನಗರದಲ್ಲಿ ವಾಸವಾಗಿರಬೇಕು.
ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರಬೇಕು. 21 ರಿಂದ 35 ವರ್ಷದೊಳಗಿರಬೇಕು. ಕನ್ನಡ ಸ್ಪಷ್ಟವಾಗಿ ಮಾತನಾಡಲು ಬರಬೇಕು. ಸಮುದಾಯದ ಕೆಲಸ ಮಾಡಲು ಆಸಕ್ತಿ ಹಾಗೂ ಉತ್ತಮ ಅಂತರ ವ್ಯಕ್ತಿಯ ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಹುದ್ದೆಗಳು ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮುರು, ಹಿರಿಯೂರು, ಹೊಸದುರ್ಗ ತಾಲ್ಲೂಕುಗಳಲ್ಲಿ ಖಾಲಿ ಇರುತ್ತದೆ. ಆಯಾ ತಾಲ್ಲೂಕಿನ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಹತೆ ಹೊಂದಿದ ಅಭ್ಯರ್ಥಿಗಳು ಸ್ವ-ವಿವರ ಹಾಗೂ ಭಾವಚಿತ್ರದೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿತ್ರದುರ್ಗ ಈ ವಿಳಾಸಕ್ಕೆ ಮೇ.22 ರೊಳಗಾಗಿ ಸಲ್ಲಿಸಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635 ಮತ್ತು 8861890895 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.