ಬೆಂಗಳೂರು: ಬ್ಯಾಂಕ್ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ವಿವಿಧ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IDBI Bank Recruitment 2025). ದೇಶಾದ್ಯಂತ ಒಟ್ಟು 119 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆ ಖಾಲಿ ಇದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಆಸಕ್ತರು ಆನ್‌ಲೈನ್ ಮೂಲಕ ಏ. 7ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏ. 20.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಡೆಪ್ಯುಟಿ ಜನರಲ್ ಮ್ಯಾನೇಜರ್ (DGM) – 8 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಬಿ.ಎಸ್‌ಸಿ, ಅಥವಾ ಬಿ.ಟೆಕ್, ಪದವಿ, ಎಂಬಿಎ, ಎಂ.ಎಸ್‌ಸಿ, ಸ್ನಾತಕೋತ್ತರ ಪದವಿ.
ಅಸಿಸ್ಟಂಟ್ ಜನರಲ್ ಮ್ಯಾನೇಜರ್ (AGM) – 42 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಬಿಸಿಎ, ಬಿ.ಎಸ್‌ಸಿ, ಎಲ್‌ಎಲ್‌ಬಿ, ಬಿ.ಇ ಅಥವಾ ಬಿ.ಟೆಕ್, ಪದವಿ, ಎಂಸಿಎ, ಎಂ.ಎಸ್‌ಸಿ, ಎಂ.ಇ ಅಥವಾ ಎಂ.ಟೆಕ್, ಎಂಬಿಎ, ಸ್ನಾತಕೋತ್ತರ ಪದವಿ.
ಮ್ಯಾನೇಜರ್ – 69 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಬಿಸಿಎ, ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್, ಪದವಿ, ಎಂಬಿಎ.
ವಯೋಮಿತಿ
ಡೆಪ್ಯುಟಿ ಜನರಲ್ ಮ್ಯಾನೇಜರ್: 35-45 ವರ್ಷ, ಅಸಿಸ್ಟಂಟ್ ಜನರಲ್ ಮ್ಯಾನೇಜರ್: 28-40 ವರ್ಷ, ಮ್ಯಾನೇಜರ್: 25-35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ/ಮಾಜಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 250 ರೂ. ಮತ್ತು ಸಾಮಾನ್ಯ/ಇಡಬ್ಲ್ಯುಎಸ್ & ಒಬಿಸಿ ಅಭ್ಯರ್ಥಿಗಳು 1,050 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಪ್ರಿಲಿಮಿನರಿ ಸ್ಕ್ರೀನಿಂಗ್ ಟೆಸ್ಟ್, ಗ್ರೂಪ್ ಡಿಸ್ಕಷನ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 1,24,000 ರೂ. – 1,97,000 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
* ಹೆಸರು ನೋಂದಾಯಿಸಿ.
* ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
* ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
* ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
* ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: http://idbibank.in/ ಗೆ ಭೇಟಿ ನೀಡಿ.