ಈ ಕೋರ್ಸ್ ಗಳಿಗೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ.!
ಚಿತ್ರದುರ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಚಿತ್ರದುರ್ಗದಲ್ಲಿ 2023-24ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (ಆಖಿಆಒ) ಹಾಗೂ ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (ಆಒಅಊ) ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪ್ರಕ್ರಿಯೆ ಆರಂಭವಾಗಿರುತ್ತದೆ.
ಜಿಟಿಟಿಸಿ ಚಿತ್ರದುರ್ಗ ಕೇಂದ್ರದಲ್ಲಿ “ಮೊದಲು ಬಂದವರಿಗೆ ಮೊದಲ ಆದ್ಯತೆ” ಮೇರೆಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಪ್ರವೇಶಾತಿಯ ಬಗ್ಗೆ ಪ್ರಾಂಶುಪಾಲರು, ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸರ್ವೇ ಸಂಖ್ಯೆ 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್ ಚಿತ್ರದುರ್ಗ, ದೂರವಾಣಿ ಸಂಖ್ಯೆ: 8073493120, 9481866855 ಗೆ ಸಂಪರ್ಕಿಸಬೇಕು ಎಂದು ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾಂಶುಪಾಲರು ತಿಳಿಸಿದ್ದಾರೆ.