ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 10,277 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಕಸ್ಟಮರ್ ಸರ್ವೀಸ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಸಾಮಾನ್ಯ ನೇಮಕಾತಿ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ದೇಶಾದ್ಯಂತ ಒಟ್ಟು 10,277 ಹುದ್ದೆಗಳ ನೇಮಕಾತಿ ನಡೆಯಲಿದೆ. ಕರ್ನಾಟಕಕ್ಕೆ 1,170 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಕರ್ನಾಟಕದ ವಿವಿಧ ಬ್ಯಾಂಕ್‌ಗಳಲ್ಲಿರುವ ಹುದ್ದೆಗಳ ವಿವರ ಹೀಗಿದೆ.
ಬ್ಯಾಂಕ್ ಆಫ್ ಬರೋಡಾ- 253
ಬ್ಯಾಂಕ್ ಆಫ್ ಇಂಡಿಯಾ- 45
ಬ್ಯಾಂಕ್ ಆಫ್ ಮಹಾರಾಷ್ಟ್ರ- 20
ಕೆನರಾ ಬ್ಯಾಂಕ್- 675
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ- 47
ಇಂಡಿಯನ್ ಓವರ್ಸೀಸ್ ಬ್ಯಾಂಕ್- 44
ಪಂಜಾಬ್ ನ್ಯಾಷನಲ್ ಬ್ಯಾಂಕ್- 6
ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್- 30
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ- 50
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.
ವಯೋಮಿತಿ: ಕನಿಷ್ಠ 20, ಗರಿಷ್ಠ ವಯೋಮಿತಿ 28 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶೇಷಚೇತನ ಅಭ್ಯರ್ಥಿಗಳಿಗೆ 175 ರೂ ಅರ್ಜಿ ಶುಲ್ಕವಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕವಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ. ಇದರಲ್ಲಿ ಆಯ್ಕೆಯಾದವರನ್ನು ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಆಗಸ್ಟ್ 1ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ 21 ಕೊನೆಯ ದಿನ. ಈ ಕುರಿತು ಹೆಚ್ಚಿನ ಮಾಹಿತಿ ಹಾಗೂ ಪರೀಕ್ಷೆಯ ತಾತ್ಕಾಲಿಕ ದಿನಾಂಕಗಳ ಮಾಹಿತಿಗೆ ಅಧಿಕೃತ ಅರ್ಜಿಯನ್ನು ibps.in ಜಾಲತಾಣದಲ್ಲಿ ಪಡೆಯಬಹುದು.