ದಾವಣಗೆರೆ: 2024-25ನೇ ಸಾಲಿನ ಪ್ರಥಮ ವರ್ಷದಲ್ಲಿ ಪೂರ್ಣಾವಧಿ ಪಿಹೆಚ್ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ,3.ಬಿ ಗೆ ಸೇರಿದ ಹೊಸ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ವೆಬ್ಸೈಟ್ http://www.bcwd.karnataka.gov.in ಅಥವಾ ಸಹಾಯವಾಣಿ ಸಂ: 8050770004 ನ್ನು ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.