ಮೈಸೂರು: ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ‘ಆದೇಶ ಜಾರಿಕಾರ’ (Process Server) ಹುದ್ದೆಗಳ ಭರ್ತಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಮಾಹಿತಿ: ಒಟ್ಟು ಹುದ್ದೆಗಳು: 11
ಅರ್ಜಿ ಸಲ್ಲಿಕೆ ಆರಂಭ: ಏಪ್ರಿಲ್ 28, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 31, 2026 (ರಾತ್ರಿ 11:59 ರವರೆಗೆ)
ಶುಲ್ಕ ಪಾವತಿಸಲು ಕೊನೆಯ ದಿನ: ಜೂನ್ 02, 2026
ವೇತನ: ₹31,775 ರಿಂದ ₹61,300 ರವರೆಗಿನ ವೇತನ ಶ್ರೇಣಿ ಇರಲಿದೆ.
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಆದ https://mysuru.dcourts.gov.in ಗೆ ಭೇಟಿ ನೀಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0821-2330453 ಅನ್ನು ಸಂಪರ್ಕಿಸಬಹುದು.

































