ಕ್ರೀಡಾಪಟುಗಳ ಪ್ರೋತ್ಸಾಹಧನ, ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿಗಳು, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

2026-27ನೇ ಸಾಲಿನ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, 2025ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಹಾಗೂ ನಗದು ಪುರಸ್ಕಾರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರೊಂದಿಗೆ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27ನೇ ಸಾಲಿನ ಗುರಿ-ಒಲಂಪಿಕ್ ಪದಕ ಮತ್ತು ಶೈಕ್ಷಣಿಕ ಶುಲ್ಕ ಮರುಪಾವತಿ ಸೌಲಭ್ಯಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ಸರ್ಕಾರದ ಅಧಿಕೃತ ಸೇವಾಸಿಂಧು ಜಾಲತಾಣದ https://sevasindhu.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಜುಲೈ 31ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-235635 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

(AI ಚಿತ್ರ )

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon