ಚಿತ್ರದುರ್ಗ: ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
2025-26 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ರಿಯಾಯಿತಿ ದರದಲ್ಲಿ ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಡೀಸೆಲ್ ಪಂಪ್‍ಸೆಟ್/ಪೆಟ್ರೋಲ್ ಪಂಪ್‍ಸೆಟ್/ಸೋಲಾರ್ ಪಂಪ್‍ಸೆಟ್ ಹಾಗೂ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ರಿಯಾಯಿತಿ ದರದಲ್ಲಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಹೊಂಡದ ಸುತ್ತ ತಂತಿ ಬೇಲಿ ಕಡ್ಡಾಯವಾಗಿರುತ್ತದೆ.
ಆಸಕ್ತ ರೈತರು ಹತ್ತಿರದ ಹೋಬಳಿ ಯಲ್ಲಿರುವ ರೈತ ಸಂಪರ್ಕ ಕೇಂದ್ರಗಳನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

































