ನವದೆಹಲಿ :ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ.
ಈ ಯೋಜನೆಗಾಗಿ 2026ರ ಮಾರ್ಚ್ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ‘ಜನ ಔಷಧಿಯಂತೆ ಪಶು ಔಷಧಿ ಎಂಬ ಯೋಜನೆಯನ್ನು ಆರಂಭಿಸಲಾಗಿದ್ದು, ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸಲಾಗುವುದು. ಅದನ್ನು ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳಲ್ಲಿ ವಿತರಿಸಲಾಗುವುದು ಎಂದರು. ಅಂತೆಯೇ, ಸಾಂಪ್ರದಾಯಿಕ ಪಶುವೈದ್ಯಕೀಯ ಔಷಧಿಗಳನ್ನು ದಾಖಲಿಸುವುದೂ ಈ ಯೋಜನೆಗೆ ಭಾಗವಾಗಿದೆ ಎಂದು ತಿಳಿಸಿದರು.