ನವದೆಹಲಿ : ಪಾಕಿಸ್ತಾನ ಮುಂದೆಯೂ ಕೂಡ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವನ್ನು ಒದಗಿಸುವುದನ್ನು ಮುಂದುವರಿಸಿದರೆ ಭಾರತ ಭಯೋತ್ಪಾದನೆಯ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ್ದಾರೆ.
ಇಂದು ಘಡ್ಶಾನಾ ಗ್ರಾಮದಲ್ಲಿ ಭಾರತೀಯ ಸೇನಾ ಕಂಟೋನ್ಮೆಂಟ್‌ನಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಜಾಗತಿಕ ಭೂಪಟದಲ್ಲಿ ಉಳಿಯಲು ಬಯಸಿದರೆ ಭಾರತದೊಳಗೆ ಭಯೋತ್ಪಾದನೆಯನ್ನು ಪ್ರಾಯೋಜಿಸುವುದನ್ನು ನಿಲ್ಲಿಸಬೇಕು ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ತೋರಿಸಿದ ಅದೇ ಸಂಯಮವನ್ನು ಮುಂದೆಯೂ ತೋರಿಸುವುದಿಲ್ಲ” ಎಂದು ತಿಳಿಸಿದ್ದಾರೆ.
“ಈ ಬಾರಿ ನಾವು ಆಪರೇಷನ್ ಸಿಂಧೂರ್ 1.0ರಲ್ಲಿ ತೋರಿದ ಅದೇ ಸಂಯಮವನ್ನು ಕಾಯ್ದುಕೊಳ್ಳುವುದಿಲ್ಲ. ಈ ಬಾರಿ ಪಾಕಿಸ್ತಾನವು ಭೌಗೋಳಿಕವಾಗಿ ಇರಬೇಕೇ ಅಥವಾ ಬೇಡವೇ ಎಂದು ಯೋಚಿಸಬೇಕಾದ ಕೆಲಸವನ್ನು ನಾವು ಮಾಡುತ್ತೇವೆ. ಪಾಕಿಸ್ತಾನ ಭೌಗೋಳಿಕವಾಗಿ ಇರಬೇಕೆಂದು ಬಯಸಿದರೆ ಅದು ಭಯೋತ್ಪಾದನೆಯನ್ನು ನಿಲ್ಲಿಸಬೇಕು” ಎಂದಿದ್ದಾರೆ.