ಮಂಗಳೂರು: ಡ್ರಗ್ ಮಾಫಿಯಾದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ಇದೀಗ ಮಹಾರಾಷ್ಟ್ರ ಮತ್ತು ಮದ್ಯಪ್ರದೇಶದಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಮೂಲತಃ ಬೀದರ್‌ನ ಪ್ರಸಕ್ತ ಕೋಡಿಪಾಳ್ಯ ನಿವಾಸಿ ಪ್ರಜ್ವಲ್ ಪೀಣ್ಯಾಸ್ ಎಂದು ಗುರುತಿಸಲಾಗಿದೆ. ಜುಲೈ 2 ರಂದು ಮಂಗಳೂರಿನಲ್ಲಿ ದಾಖಲಾಗಿದ್ದ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದುವರಿದ ತನಿಖೆಯ ಭಾಗವಾಗಿ ಈ ಆರೋಪಿ ಅರೆಸ್ಟ್ ಆಗಿದ್ದಾನೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ 9 ಜನರನ್ನು ಅರೆಸ್ಟ್ ಮಾಡಲಾಗಿದ್ದು, ಆರೋಪಿ ಪ್ರಜ್ವಲ್ ನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅರೆಸ್ಟ್ ಆದ ಆರೋಪಿ ಈ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಆತನ ಮೇಲೆ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 03 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದೆ.