ಬೆಳಗಾವಿ, ಚಿಕ್ಕಮಗಳೂರು: ಜಾತ್ರೆ ಬಂದೋಬಸ್ತ್ ಗೆ ಬಂದಿದ್ದ ಎಎಸ್ ಐ ಹಾಗೂ ಚಿಕ್ಕಮಗಳೂರಿನಲ್ಲಿ ಓರ್ವ ಹೃದಯಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆ ಬಂದೋಬಸ್ತ್ ಗೆ ಬಂದಿದ್ದ ASI ‘ಎಲ್ ಜೆ ಮೀರಾನಾಯಕ್’ (56) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಎಪಿಎಂಸಿ ಠಾಣೆಯಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು.ಎಲ್ ಜೆ ಮೀರಾನಾಯಕ್ ಬಾಲಕರ ವಸತಿ ನಿಲಯದಲ್ಲಿ ತಂಗಿದ್ದರು. ಆದರೆ ಧಿಡೀರ್ ಹೃದಯಾಘಾತದಿಂದ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.!
ಹಾಗೆ ಚಿಕ್ಕಮಗಳೂರಿನಲ್ಲಿ ಎರಡು ದಿನಗಳ ಹಿಂದೆ ಹೃದಯಾಘಾತಕ್ಕೆ 29 ವರ್ಷದ ಯುವಕ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಸಗೀರ್ ಅಹ್ಮದ್(45) ಹೃದಯಾಘಾತದಿಂದ ಸಾವನ್ನಪ್ಪಿದವರು. ಅಜ್ಜಂಪುರ ಪಟ್ಟಣದ ನಿವಾಸಿಯಾಗಿದ್ದ ಸಗೀರ್ ಅಹ್ಮದ್ ಊಟ ಮಾಡುವಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಸ್ಥಳದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.