ಚಿತ್ರದುರ್ಗ: ರಸ್ತೆಗೆ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಎಎಸ್ಐ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ನಲ್ಲಿ ನಡೆದಿದೆ.
ಪರಶರಾಂಪುರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ (50) ಮೃತ ದುರ್ದೈವಿ. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ವಾಪಸ್ ಆಗಿವಾಗ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದಿದೆ. ನಾಯಿ ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿದ್ದು, ಕೆಳಗೆ ಬಿದ್ದ ಎಎಸ್ಐ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಬೈಕ್ ನಲ್ಲಿದ್ದ ಮತ್ತೋರ್ವ ಪೊಲೀಸ್ ಪೇದೆ ಸೂರ್ಯಪ್ರಭಾ ಎಂಬುವವರು ಗಂಭೀರವಾಅಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

































