ಕೊಲಂಬೊ: ಏಷ್ಯಾ ಕಪ್ 2023ರ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಭಾರತ ಪ್ಲೆಯಿಂಗ್ XI ಗೆ ಸೇರಿಸಲಾಗಿದೆ. ಇದಲ್ಲದೆ, ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿರುವ ಅಕ್ಷರ್ ಪಟೇಲ್ ಬದಲಿಗೆ ವಾಷಿಂಗ್ಟನ್ ಸುಂದರ್ ಅವಕಾಶ ಪಡೆದುಕೊಂಡಿದ್ದಾರೆ.
