ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ, ನಟ ಎ.ಟಿ. ರಘು ನಿಧನರಾಗಿದ್ದಾರೆ.
ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಂಡ್ಯದ ಗಂಡು’ ಸೇರಿದಂತಹ 55 ಸಿನಿಮಾ ಗಳನ್ನು ನಿರ್ದೇಶನ ಮಾಡಿದ್ದಾರೆ. ಅಂಬರೀಶ್ ಅವರ ಅಭಿನಯದ 27 ಸಿನಿಮಾಗಳನ್ನು ಎ.ಟಿ. ರಘು ನಿರ್ದೇಶನ ಮಾಡಿದ್ದಾರೆ. ಅನೇಕ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.
ನ್ಯಾಯ ನೀತಿ ಧರ್ಮ, ಅವಳ ನೆರಳು, ಅವಳ ನೆರಳು, ಅಂತಿಮ ತೀರ್ಪು, ಇನ್ಸ್ಪೆಕ್ಟರ್ ಕ್ರಾಂತಿಕುಮಾರ್, ಮಿಡಿದ ಹೃದಯಗಳು, ಮಂಡ್ಯದ ಗಂಡು, ಅಗ್ನಿಸಾಕ್ಷಿ ಸೇರಿದಂತೆ ಸುಮಾರು 55 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದರು.