ನವದೆಹಲಿ : ಎಟಿಎಂಗಳಿಂದ ಹಣ ವಿತ್ ಡ್ರಾ ಮಾಡುವುದರ ಮೇಲೆ ವಿಧಿಸಲಾಗುವ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಮೇ.1 ರಿಂದ 2 ರೂ. ಹೆಚ್ಚಳವಾಗಲಿದೆ.
ಎಟಿಎಂಗಳಿಂದ ಹಣ ವಿತ್ ಡ್ರಾ ಮಾಡುವ ಶುಲ್ಕವನ್ನು ಹೆಚ್ಚಿಸಲು ಬ್ಯಾಂಕ್‌ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಅನುಮತಿ ನೀಡಿದೆ. ಈ ಹಿನ್ನೆಲೆ ಇದೇ ಮೇ. 1ರಿಂದ ಹೊಸ ಶುಲ್ಕಗಳು ಅನ್ವಯವಾಗಲಿದೆ.
ಒಂದು ತಿಂಗಳಿಗೆ ಎಟಿಎಂನಿಂದ 5 ಬಾರಿ ಉಚಿತವಾಗಿ ಹಣವನ್ನು ಡ್ರಾ ಮಾಡಬಹುದು. ಅದಕ್ಕಿಂತ ಹೆಚ್ಚು ಬಾರಿ ಹಣ ವಿತ್ ಡ್ರಾ ಮಾಡಿದರೆ 21 ರೂ.ಗಳನ್ನು ಕಡಿತಗೊಳಿಸುತ್ತಿತ್ತು. ಆದರೆ ಇದೀಗ ಈ ಶುಲ್ಕವನ್ನು 2ರೂ.ಗೆ ಏರಿಕೆ ಮಾಡಲಾಗಿದ್ದು, ಈ ಮೂಲಕ 5 ಬಾರಿಗಿಂತ ಹೆಚ್ಚು ಬಾರಿ ಹಣ ವಿತ್ ಡ್ರಾ ಮಾಡಿದರೆ 23 ರೂ. ಕಡಿತಗೊಳಿಸಲಾಗುತ್ತದೆ.
ಪ್ರಸ್ತುತ, ಬೆಂಗಳೂರು, ಚೆನ್ನೈ, ಹೈದರಾಬಾದ್, ಕೋಲ್ಕತ್ತಾ, ಮುಂಬೈ ಮತ್ತು ನವದೆಹಲಿಯಲ್ಲಿ ಖಾತೆ ಹೊಂದಿರುವವರು ತಮ್ಮ ಬ್ಯಾಂಕಿನ ಎಟಿಎಂಗಳಲ್ಲಿ ಮಾಸಿಕ ಐದು ಮತ್ತು ಇತರ ಬ್ಯಾಂಕುಗಳ ಎಟಿಎಂಗಳಲ್ಲಿ ಮೂರು ಉಚಿತ ವಿತ್ ಡ್ರಾ ಮಾಡಿಕೊಳ್ಳಬಹುದು. ಗರಿಷ್ಠ ಮಿತಿ ಮೀರಿ ಹಣ ಡ್ರಾ ಮಾಡಿದರೆ 2ರೂ. ಏರಿಕೆಯ ಇಂಟರ್‌ಚೇಂಜ್ ಶುಲ್ಕವನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ.