ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಮೇಲೆ ಹಲ್ಲೆಯಾಗಿದೆ. ಮೂಗಿನಿಂದ ರಕ್ತ ಸೋರುವಂತೆ ಹೊಡೆಯಲಾಗಿದೆ.ಜೊತೆಗೆ ಲಾಯರ್ ಜಗದೀಶ್ ಅವರ ಸ್ಕಾರ್ಪಿಯೋ ವಾಹನವನ್ನು ಜಖಂ ಮಾಡಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿಯೇ ಕೂತು ಲಾಯರ್ ಜಗದೀಶ್ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಲಾಯರ್ ಜಗದೀಶ್ ಹಾಗೂ ದರ್ಶನ್ ಅಭಿಮಾನಿಗಳು ಎನ್ನಲಾದ ಕೆಲವರ ಮಧ್ಯೆ ಕಿತ್ತಾಟ ನಡೆಯುತ್ತಿದೆ. ಇತ್ತೀಚೆಗಷ್ಟೇ ಲಾಯರ್ ಜಗದೀಶ್ ಮೇಲೆ ಕೆಲವರು ಹಲ್ಲೆ ಮಾಡಿದ್ದರು. ಈ ಸಂಬಂಧ ಲೈವ್‌ಗೆ ಬಂದಿದ್ದ ಲಾಯರ್ ಜಗದೀಶ್ ಆಕ್ರೋಶ ಹೊರ ಹಾಕಿದ್ದರು. ದರ್ಶನ್ ಫ್ಯಾನ್ಸ್ ವಿರುದ್ಧ ತಿರುಗಿಬಿದ್ದಿದ್ದರು. ಅಭಿಮಾನಿಗಳಿಗೆ ಎಚ್ಚರಿಕೆಯನ್ನು ನೀಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಲಾಯರ್ ಜಗದೀಶ್ ಮೇಲೆ ಮತ್ತೆ ಹಲ್ಲೆಯಾಗಿದೆ.
ಆದರೆ, ಈ ಬಾರಿ ಹಲ್ಲೆ ಮಾಡಿದವರು ಯಾರು ಅನ್ನೋದು ಇನ್ನೂ ರಿವೀಲ್ ಆಗಿಲ್ಲ. ಕಿಡಿಗೇಡಿಗಳು ಲಾಯರ್ ಜಗದೀಶ್ ಹಾಗೂ ಅವರ ಪುತ್ರನ ಮೇಲೆ ಹಲ್ಲೆಗೆ ಮಾಡಿದ್ದಾಗಿ ತಿಳಿಸಿದ್ದಾರೆ. ಜಗದೀಶ್ ಮೂಗು ಹಾಗೂ ತುಟಿಗಳಿಂದ ರಕ್ತ ಸುರಿಯುತ್ತಿದ್ದು, ಅದೇ ಸ್ಥಿತಿಯಲ್ಲಿಯೇ ಫೇಸ್‌ಬುಕ್‌ನಲ್ಲಿ ಲೈವ್ ಬಂದಿದ್ದಾರೆ. ಅದರಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ.