ಹೊಸಪೇಟೆ: ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಆಡಿಯೋ ಮತ್ತು ವಿಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು ಆಯೋಜಿಸÀಲಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ಅವರು ತಿಳಿಸಿದ್ದಾರೆ.
ತರಬೇತಿ ಕಾರ್ಯಗಾರವನ್ನು ಆ.29 ರಿಂದ ಸೆ.02ರವರೆಗೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಅಕಾಡೆಮಿ ಕಚೇರಿ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ತರಬೇತಿ ವೆಚ್ಚ, ವಸತಿ ವೆಚ್ಚ ಪ್ರತ್ಯೇಕವಾಗಿರುತ್ತದೆ(3000+1500) https://forms.gle/2qH2JmtMfCBfq7zv5 ಮೂಲಕ ಗೂಗಲ್ ಅರ್ಜಿ ಭರ್ತಿ ಮಾಡಿ, ಪ್ರತಿಯನ್ನು ಯುಆರ್‌ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿ.ಕೆ.ವಿ.ಕೆ. ಆವರಣ, ದೊಡ್ಡಬೆಟ್ಟಹಳ್ಳಿ ಬಸ್ ನಿಲ್ದಾಣ, ವಿದ್ಯಾರಣ್ಯಪುರ, ಬೆಂಗಳೂರು-560097 ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ kstacademy.in ಅಥವಾ ದೂ.08029-721550 ಮೂಲಕ ಸಂಪರ್ಕಿಸಬಹುದಾಗಿದೆ.