ಆಕ್ಸಿಯಂ-4 ಉಡಾವಣೆ ಯಶಸ್ವಿ: ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷಯಾನ ಶುರು

WhatsApp
Telegram
Facebook
Twitter
LinkedIn

ನವದೆಹಲಿ:  ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್‌ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.

ತಾಂತ್ರಿಕ ತೊಂದರೆಗಳ ಕಾರಣದಿಂದಾಗಿ ಆಕ್ಸಿಯಮ್ 4 ಮಿಷನ್ ಉಡಾವಣೆ ವಿಳಂಬವಾಗಿತ್ತು. ಇದೀಗ ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದೆ. ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಾಸಾ ಮತ್ತು ಸ್ಪೇಸ್‌ಎಕ್ಸ್ ಮೂಲಗಳು ಖಚಿತಪಡಿಸಿದ್ದವು.

ಅದರಂತೆ ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಪ್ರಯಾಣ ಬೆಳೆಸಿದೆ.

ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ. ಜೊತೆಗೆ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ನಡೆಸಲಿದ್ದಾರೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon