ಕೇರಳ: ಶಬರಿಮಲೆಯಲ್ಲಿ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ.
ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆದರೆ ಈ ವೇಳೆ ಅಲ್ಲಿದ್ದವರು ತಕ್ಷಣ ಭಕ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಭಕ್ತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ವಿವರ ಇನ್ನಷ್ಟೇ ತಿಳಿಯಬೇಕಿದೆ.