ಬೆಂಗಳೂರು: ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ಪ್ರಕರಣವನ್ನು ಹಿಂಪಡೆಯುವುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅ.31ರಂದು ಅಲೆಮಾರಿ ಸಮುದಾಯಗಳ ಸಭೆ ಮಾಡ್ತೀವಿ. ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಮಾಡಿದ್ದೇವೆ. ಇದರ ಅನುಷ್ಠಾನಕ್ಕೆ ಬಿಲ್ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಂಬಂಧಿಸಿದ ಇಲಾಖೆಗಳ ಜೊತೆಗೆ ಚರ್ಚೆ ಮಾಡಲಾಗಿದೆ ಎಂದರು.
ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್ ಪಡೆಯುವುದಾಗಿ ಇದೇ ಸಂದರ್ಭದಲ್ಲಿ ಸಚಿವ ಮಹದೇವಪ್ಪ ಘೋಷಿಸಿದರು.































