ಮುದ್ದೇಬಿಹಾಳ: ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯದ ಹಿನ್ನೆಲೆ ತರಬೇತಿ ಕಾರ್ಯಕ್ಕೆ ಕರೆದೊಯ್ಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ನಡೆದಿದೆ.
ಮೂಲಗಳ ಪ್ರಕಾರ ಬಸ್‌ನ ಎಕ್ಸಲ್ ಕಟ್ ಆಗಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ಅಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತವಾದಾಗ ಹಿಂದಿನ ಬಸ್ಸಿನಲ್ಲಿದ್ದವರು ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದಾರೆ.