ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ.
ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ ಬೆನ್ನುನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.
ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಗೆ ಈಗ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವುದು ಅನುಮಾನ, ಫಿಸಿಯೋಥೆರೆಪಿ ಚಿಕಿತ್ಸೆಯನ್ನೇ ಮುಂದುವರೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.