ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಕೂಡ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ.
ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಗೆ ತಲುಪಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.